ರಾಮನಗರ: ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಚನ್ನಪಟ್ಟಣ ಸಮೀಪದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಮೃತರನ್ನು ಸಿದ್ದಪ್ಪ (65) ಮತ್ತು ಅರುಣಾ (23) ಎಂದು ಗುರುತಿಸಲಾಗಿದೆ.
ಚನ್ನಪಟ್ಟಣಕ್ಕೆ ತೆರಳುತ್ತಿದ್ದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ