ಬೆಂಗಳೂರು : ಅರೆಕಾಲಿಕ ಕೆಲಸ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಪನ್ಯಾಸಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಯಲಹಂಕದ ಖಾಸಗಿ ಕಾಲೇಜಿನ ಉಪನ್ಯಾಸಕ ಮದಂ ಕುಮಾರ್ ಎಂ.ಜಿ.ರಸ್ತೆಯಲ್ಲಿರುವ ಹೋಟೆಲ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಘಟನೆಯನ್ನು ಚಿತ್ರೀಕರಿಸಿ ವಿದ್ಯಾರ್ಥಿನಿಯನ್ನು ಬ್ಲ್ಯಾಕ್ಮೇಲ್ ಮಾಡಿದ್ದನು.
ಚಿತ್ರಹಿಂಸೆಯನ್ನು ಸಹಿಸಲಾಗದೆ ಸಂತ್ರಸ್ತೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಇಂದು ಬೆಳಿಗ್ಗೆ ಆರೋಪಿಗಳನ್ನು ಬಂಧಿಸಿದ್ದಾರೆ.