ಮಂಗಳೂರು: ಸೌದಿ ಅರೇಬಿಯಾದಲ್ಲಿ ಜೈಲು ಪಾಲಾಗಿದ್ದ ಯುವಕ ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನಿವಾಸಿ ಚಂದ್ರಶೇಖರ್,ರಿಯಾದ್ ನಿಂದ ಮುಂಬೈಗೆ ಬಂದು ಅಲ್ಲಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ತಾನು ಮಾಡದ ತಪ್ಪಿಗೆ 11 ತಿಂಗಳುಗಳಿಂದ ಸೌದಿ ಜೈಲಿನಲ್ಲಿದ್ದ ಚಂದ್ರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊರ ಬರುತ್ತಲೇ ಭಾವುಕರಾದರು.
ಮಗನನ್ನು ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ತಾಯಿ ಹೇಮಾವತಿ. ಸಿಮ್ ಖರೀದಿಸಲು ಹೋಗಿದ್ದ ಚಂದ್ರು ಬ್ಯಾಂಕ್ ಖಾತೆ ಹ್ಯಾಕ್ ಆಗಿತ್ತು. ಹ್ಯಾಕ್ ಆದ ಖಾತೆಗೆ ಮಹಿಳೆಯೊಬ್ಬರ ಖಾತೆಯಿಂದ SR 22 ಸಾವಿರ ಹಣ ವರ್ಗಾಯಿಸಿ ಚಂದ್ರಶೇಖರ್ ರವರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.
ಈ ಕಾರಣಕ್ಕೆ ಜೈಲು ಪಾಲಾಗಿದ್ದ ಚಂದ್ರಶೇಖರ್ ಇದೀಗ ಭಾರತೀಯ ವಿದೇಶಾಂಗ ಇಲಾಖೆ ಸೇರಿದಂತೆ ಹಲವರ ಪ್ರಯತ್ನದಿಂದ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.