ವಿಶಾಖಪಟ್ಟಣಂ: ಆಟೋರಿಕ್ಷಾ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಏಳು ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ಬುಧವಾರ ನಡೆದಿದೆ.
ಸಂಗಮ್ ಶರತ್ ಥಿಯೇಟರ್ ಅಡ್ಡರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ವೇಗವಾಗಿ ಚಲಿಸುತ್ತಿದ್ದ ಆಟೋರಿಕ್ಷಾ ನಿಯಂತ್ರಣ ಕಳೆದುಕೊಂಡು ಟ್ರಕ್ ಗೆ ಡಿಕ್ಕಿ ಹೊಡೆದಿದೆ.
ತ್ರಿಚಕ್ರ ವಾಹನ ಪಲ್ಟಿಯಾಗಿ ಮಕ್ಕಳು ರಸ್ತೆಗೆ ಬಿದ್ದಿದ್ದಾರೆ. ಗಾಯಗೊಂಡವರ ರಕ್ಷಣೆಗೆ ಧಾವಿಸಿದ ಪಾದಚಾರಿಗಳು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಟ್ರಕ್ ಸ್ಥಳದಿಂದ ಸುಮಾರು 100 ಮೀಟರ್ ದೂರದಲ್ಲಿ ನಿಂತಿತು. ಸ್ಥಳೀಯರು ಚಾಲಕ ಮತ್ತು ಕ್ಲೀನರ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದ ನಂತರ, ಆಟೋರಿಕ್ಷಾ ಚಾಲಕನ ನಿರ್ಲಕ್ಷ್ಯದಿಂದಾಗಿ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.