ಮಂಗಳೂರು : ರಾಜ್ಯಾಧ್ಯಕ್ಷರ ನೇಮಕ ಆಗಿಲ್ಲ ಅನ್ನೋ ಚರ್ಚೆ ಇತ್ತು.ಸಾಕಷ್ಟು ಪೈಪೋಟಿ ಇದೆ ಭಿನ್ನಮತ ಇದೆ ಅನ್ನೋ ಚರ್ಚೆ ನಡಿತ್ತು. ಆಡಳಿತ ಪಕ್ಷದ ಕಾಂಗ್ರೆಸ್ ಮುಖಂಡರು ನಮ್ಮನ್ನ ಟೀಕೆ ಮಾಡತ್ತಾ ಇದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಮಂಗಳೂರಿಗೆ ಆಗಮಿಸಿದ ಅವರು ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಬರ ನಿರ್ವಹಣೆಯ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಚಿವರು ಮುಂದಿನ ಲೋಕಸಭಾ ಚುನಾವಣೆ, ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಅಭಿವೃದ್ಧಿ ಯೋಜನೆಗಳಿಗೆ ಸರಕಾರದಿಂದ ಹಣ ಬಿಡುಗಡೆಯಾಗುತ್ತಿಲ್ಲ ಈ ಎಲ್ಲ ವಿಚಾರವಾಗಿ ಮುಂದಿನ ಅಧಿವೇಶನದಲ್ಲಿ ಸರಕಾರದ ಕಿವಿ ಹಿಂಡುವ ಕೆಲಸ ಬಿಜೆಪಿ ಮಾಡಲಿದೆ ಎಂದು ವಿಜಯೇಂದ್ರ ಹೇಳಿದರು.
ಬಿಜೆಪಿಯಿಂದ ಯಾರು ಹೊರ ಹೋಗುವುದಿಲ್ಲ. ಬಿಜೆಪಿ ತೊರೆದು ಹೋಗಿರುವವರನ್ನು ಮರಳಿ ಪಕ್ಷ ಕ್ಕೆ ಕರೆತರಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
ಜಾತಿಗಣತಿಗೆ ಬಿಜೆಪಿಯ ವಿರೋಧವಿಲ್ಲ. ಈ ವಿಚಾರದಲ್ಲಿ ರಾಜಕೀಯ ಲಾಭ ಪಡೆಯುವ ದುರುದ್ದೇಶಕ್ಕಷ್ಟೇ ಬಿಜೆಪಿಯ ವಿರೋಧ ವಿದೆ. ಈ ವರದಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ವಿಳಂಬ ಮಾಡಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ರಾಷ್ಟ್ರೀಯ ನಾಯಕರ ತೀರ್ಮಾನದ ಮೇರೆಗೆ ದೊಡ್ಡ ಜವಾಬ್ದಾರಿಯನ್ನ ನನಗೆ ನೀಡಿದ್ದಾರೆ.ನಮ್ಮ ಕರಾವಳಿ ಭಾಗದ ಎಲ್ಲಾ ಕಾರ್ಯಕರ್ತರಿಗೆ ನಾನು ಹೇಳೋದು ಏನು ಅಂದ್ರೆ ರಾಜ್ಯಾಧ್ಯಕ್ಷ ಜವಾಬ್ದಾರಿಯುತ ಸ್ಥಾನ. ಹಿಂದಿನ ಯಶಸ್ವಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಂತೆ ನನ್ನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತೇನೆ.
ಹಿಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರವಸೆಗಳಿಂದ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಇಡೀ ದೇಶದಲ್ಲಿ ತನ್ನ ಜನಪ್ರಿಯತೆ ಕಳೆದುಕೊಂಡ ಸರಕಾರ ಎಂದರೆ ಕಾಂಗ್ರೆಸ್ ಸರಕಾರ.ರೈತ ವಿರೋಧಿ ಸರಕಾರ, ಬಡವರ ವಿರೋಧಿ ಸರಕಾರ, ದಲಿತ ವಿರೋಧಿ ಸರಕಾರ ಆಗಿದೆ.ಮತ ಕೊಟ್ಟ ಜನರು ಪಶ್ಚತ್ತಾಪ ಪಡುತ್ತಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜಯ ಗಳಿಸುವುದು ಬಿಜೆಪಿಯ ಗುರಿಯಾಗಿದೆ ಎಂದು ವಿಜಯೇಂದ್ರ ನುಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು,ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ ಕೋಟ್ಯಾನ್, ಡಾ.ವೈ.ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಪ್ರತಾಪ್ ಸಿಂಹ ನಾಯಕ್, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ವಿಭಾಗದ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.