ಶಿವಮೊಗ್ಗ: ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಭದ್ರಾವತಿ ಪಟ್ಟಣದ ಹುಣಸಕಟ್ಟೆ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ.ಮೃತರನ್ನು ಬೀರು (32) ಮತ್ತು ಸುರೇಶ್ (30) ಎಂದು ಗುರುತಿಸಲಾಗಿದೆ.
ಸಿಡಿಲು ಬಡಿದ ಸಂದರ್ಭದಲ್ಲಿ ಇಬ್ಬರೂ ತಮ್ಮ ಭತ್ತದ ಗದ್ದೆಯಲ್ಲಿದ್ದರು.ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆಯನ್ನು ಕಾಯಲು ಹೋಗಿದ್ದರು.
ಮೃತ ದೇಹಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ