ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಕರ್ನಾಟಕ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ತಿಲಕ್ನಗರ ಪೊಲೀಸ್ ಠಾಣೆಯಲ್ಲಿ 28 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ನಿವೃತ್ತ ಅಧಿಕಾರಿ ರಾಮಚಂದ್ರ ವಿರುದ್ಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸಂತ್ರಸ್ತೆ, ಆರೋಪಿ ಪಾನೀಯದಲ್ಲಿ ಮಾದಕ ದ್ರವ್ಯವನ್ನು ಬೆರೆಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾನು ಈಗ ಎಂಟು ತಿಂಗಳ ಗರ್ಭಿಣಿಯಾಗಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ.
ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.