ಉಡುಪಿ: ಸಮಾಜಿಕ ಮುಂದಾಳು ಲೀಲಾಧರ್ ಶೆಟ್ಟಿ ಮತ್ತು ಅವರ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತರನ್ನು ಲೀಲಾಧರ್ ಶೆಟ್ಟಿ (68) ಮತ್ತು ವಸುಂಧರಾ ಶೆಟ್ಟಿ (58) ಎಂದು ಗುರುತಿಸಲಾಗಿದೆ. ದಂಪತಿಗಳ ಶವಗಳು ಕಾಪು ಪಟ್ಟಣದ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಲೀಲಾಧಾರ ಶೆಟ್ಟಿಯವರು ಪ್ರಸಿದ್ಧ ಕಲಾವಿದರಾಗಿದ್ದರು ಮತ್ತು ರಂಗತರಂಗ ನಾಟಕ ತಂಡವನ್ನು ಸ್ಥಾಪಿಸಿದರು. ಅವರು ಲೀಲಣ್ಣ ಎಂದು ಜನಪ್ರಿಯರಾಗಿದ್ದರು. ಸಮಾಜಕ್ಕೆ ನೀಡಿದ ಕೊಡುಗೆಗಾಗಿ ದಂಪತಿಗಳು ವಿವಿಧ ಪ್ರಶಸ್ತಿಗಳನ್ನು ಸಹ ಪಡೆದಿದ್ದರು.
ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಮತ್ತು ಕೌಟುಂಬಿಕ ಕಲಹವೇ ದಂಪತಿ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ದಂಪತಿಗಳು ಬರೆದ ಆತ್ಮಹತ್ಯೆ ಪತ್ರವನ್ನು ಪೊಲೀಸರು ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಕಾಪು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.