ಮುಂಬೈ: ಕನ್ನಡ ಶಾಲೆಗಳನ್ನು ಉಳಿಸಲು ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟೂರಾದ ಕೆರಾಡಿಯ ಸರ್ಕಾರಿ ಶಾಲೆಯನ್ನು ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ದತ್ತು ಪಡೆದಿದ್ದಾರೆ.
ತಮ್ಮ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ‘ ಚಿತ್ರದ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ ರಿಷಬ್, ಅಳಿವಿನಂಚಿನಲ್ಲಿರುವ ಕೆರಾಡಿಯ ಸರ್ಕಾರಿ ಕನ್ನಡ ಮಾದ್ಯಮ ಶಾಲೆಯನ್ನು ದತ್ತು ಪಡೆದಿದ್ದಾರೆ.
ಗ್ರಾಮದ ಮುಖಂಡರು ಮತ್ತು ಹಿರಿಯರು ಈ ಸಂದರ್ಭದಲ್ಲಿ ಹಾಜರಿದ್ದರು ಮತ್ತು ಗ್ರಾಮದ ಶಾಲೆಯನ್ನು ದತ್ತು ಪಡೆದ ರಿಷಬ್ ಅವರನ್ನು ಅಭಿನಂದಿಸಿದರು.
ರಿಷಬ್ ಅವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಗಲ್ಲಾಪೆಟ್ಟಿಗೆಯಲ್ಲಿ ಬ್ಲಾಕ್ ಬಾಸ್ಟರ್ ಎಂದು ಘೋಷಿಸಲ್ಪಟ್ಟಿತು. 2019 ರಲ್ಲಿ, ಇದು 66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಮಕ್ಕಳ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿತ್ತು.