ಬೀದರ್ : ವಿದ್ಯಾರ್ಥಿಗಳನ್ನು ಬಟ್ಟೆ ಬಿಚ್ಚಿ ಥಳಿಸಿದ ಆರೋಪದ ಮೇಲೆ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಮಂಗಳವಾರ ಬಂಧಿಸಿದ್ದಾರೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ತರಗತಿಯಲ್ಲಿ ಗಲಾಟೆ ಮಾಡುವ ವಿದ್ಯಾರ್ಥಿಗಳಿಗೆ ಶಿಕ್ಷೆಯಾಗಿ ಶಿಕ್ಷಕ ಈ ಕೃತ್ಯವನ್ನು ಮಾಡಿದ್ದಾನೆ.
ಆರೋಪಿ ಶಿಕ್ಷಕ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳನ್ನು ಈ ರೀತಿ ಅಮಾನವೀಯವಾಗಿ ಥಳಿಸಿದ್ದಾನೆ.. ಶಿಕ್ಷಕನು ನಿಂದಿಸಿದ್ದಲ್ಲದೆ, ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಪೋಷಕರು ತಮ್ಮ ಮಕ್ಕಳ ದೇಹದ ಮೇಲೆ ಗಾಯದ ಗುರುತುಗಳನ್ನು ಗಮನಿಸಿದರು ಮತ್ತು ಘಟನೆಯ ಬಗ್ಗೆ ತಿಳಿದುಕೊಂಡು ನಂತರ, ಪೋಷಕರು ಪೊಲೀಸರಿಗೆ ದೂರು ನೀಡಿದ್ದರಿಂದ ಶಿಕ್ಷಕನನ್ನು ಬಂಧಿಸಲು ಸಾಧ್ಯವಾಯಿತ್ತು