ಮಂಗಳೂರು: ರಾಜ್ಯದಲ್ಲಿ ಲೊಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು ಪಕ್ಷದ ಸಂಘಟನಾತ್ನಕ ಶಕ್ತಿಯನ್ನಯ ಹೆಚ್ಚಿಸಲು 39 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡಕ್ಕೆ ಹಿರಿಯ ಬಿಜೆಪಿ ನಿಷ್ಟವಂತ ಕಾರ್ಯಕರ್ತ ಸತೀಶ್ ಕುಂಪಲ , ಹಾಗೂ ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರನ್ನು ನೇಮಕ ಮಾಡಲಾಗಿದೆ.
ಸತೀಶ ಕುಂಪಲ ಸತೀಶ ಕುಂಪಲ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಾಗಿ ಆಡಳಿತ ಅನುಭವಿ. ಮೂರು ಬಾರಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಆಗಿದ್ದರು. ಎರಡು ಬಾರಿ ಗ್ರಾಮ ಪಂಚಾಯ್ತಿ ಸದಸ್ಯರಾಗಿ, ಉಳ್ಳಾಲ ಮಂಡಲದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸ್ಪೀಕರ್ ಯು.ಟಿ. ಖಾದರ್ ಎದುರು ಮಂಗಳೂರು ವಿಧಾನ ಸಭಾಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಆರ್ ಎಸ್ ಎಸ್ ನಾಯಕರ ಒಲವು ಮತ್ತು ಪಕ್ಷದಲ್ಲಿ ಸುದೀರ್ಘಕಾಲದಿಂದಲೂ ಅವರು ಹೊಂದಿರುವ ನಿಷ್ಠೆಯನ್ನು ಪರಿಗಣಿಸಿ ಅವರ ಹೆಸರನ್ನು ಇದೀಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಹುದ್ದೆಗೆ ಪರಿಗಣಿಸಲಾಗಿದೆ. ಜೊತೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಬಲವಾಗಿರುವ ಬಿಲ್ಲವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಈ ನಾಯಕನಿಗೆ ಪಟ್ಟ ಕಟ್ಟಲಾಗಿದೆ ಎಂದು ವಿಶ್ಲೇಶಿಸಲಾಗುತ್ತಿದೆ.
ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಿಶೋರ್ ಕುಂದಾಪುರ ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಅವರು 2013 ರಲ್ಲಿ ಅಂದಿನ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪಕ್ಷೇತರರಾಗಿ ಸ್ಪರ್ಧೆ ಮಾಡಿದ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕುಂದಾಪುರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
ಉತ್ತರ ಕನ್ನಡಕ್ಕೆ ಎನ್.ಎಸ್ ಹೆಗಡೆಯವನ್ನು ನೇಮಕ ಮಾಡಲಾಗಿದೆ. ಬಹುತೇಕ ಈ ಬಾರಿ ಹೊಸ ಮುಖಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ.