ಮಂಗಳೂರು: ದ.ಕ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಹುಲ್.
ಸ್ನೇಹಿತರೊಂದಿಗೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು,ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ಮಹಾಪೂಜೆಯಲ್ಲಿ ಭಾಗಿಯಾದರು.
ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಬರಮಾಡಿಕೊಳ್ಳಲಾಯಿತು.ವಿಶ್ವಕಪ್ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಕುಕ್ಕೆಗೆ ಭೇಟಿ ನೀಡಿದ್ದಾರೆ.
2023ರ ಜೂನ್ ನಲ್ಲಿ ಕುಕ್ಕೆಗೆ ಭೇಟಿ ನೀಡಿದ್ದ ರಾಹುಲ್.ಕುಕ್ಕೆ ಸುಬ್ರಹ್ಮಣ್ಯನ ಅನನ್ಯ ಭಕ್ತರಾದ ರಾಹುಲ್ ಪ್ರತಿವರ್ಷ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆಯುತ್ತಾರೆ.