ಮಂಗಳೂರು : ಅಯೋಧ್ಯೆಯಲ್ಲಿ ಇಂದು ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಈ ನಡುವೆ ಅಯೋಧ್ಯೆ ರಾಮಮಂದಿರಕ್ಕಾಗಿ ಹರಕೆ ಹೊತ್ತಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ರ ವರಿಂದ ಇಂದು ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆ ಸಲ್ಲಿಸಿದ್ದರು
ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂದು ಈ ಹಿಂದೆ ಉರುಳು ಸೇವೆ ಸಲ್ಲಿಸುತ್ತೇನೆಂದು ಮನಸ್ಸಲ್ಲಿ ಪ್ರಾರ್ಥಿಸಿದ್ದರು. ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಸುಸಂದರ್ಭದಲ್ಲಿ, ರಾಮಮಂದಿರ ಕಾರ್ಯ ನಿರ್ವಿಘ್ನವಾಗಿ ನಡೆಯುವಂತಾಗಲಿ, ಆ ಮೂಲಕ ಲೋಕಕ್ಕೆ ಒಳಿತಾಗಲಿ ಎಂದು ಈ ಹಿಂದೆ ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದಲ್ಲಿ ವಿಶೇಷ ಸಂಕಲ್ಪ ಕೈಗೊಂಡಿದ್ದ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಉರುಳು ಸೇವೆ ಮಾಡುವ ಮೂಲಕ ತಮ್ಮ ಹರಕೆಯನ್ನು ತೀರಿಸಿದರು.