ಮಂಗಳೂರು : ಬೆಳ್ತಂಗಡಿ ವೇಣೂರಿನ ಕಡ್ತ್ಯಾರುನ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಸಂಭವಿಸಿ ಮೂವರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡದ ದೂರು ನೀಡಿದ್ದು ಎಫ್ಐಆರ್ ದಾಖಲಾಗಿತ್ತು.
ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್(47) ಮತ್ತು ಕಾರ್ಮಿಕರನ್ನು ಕರೆತಂದು ಕೆಲಸ ಮಾಡುತ್ತಿದ್ದ ಹಾಸನ ಜಿಲ್ಲೆಯ ವಡ್ಡರಹಳ್ಳಿ ನಿವಾಸಿ ಕಿರಣ್ (24) ಘಟನೆ ಬಳಿಕ ವೇಣೂರಿನಿಂದ ಅಲ್ಟೋ ಕಾರಿನಲ್ಲಿ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದು ಕೊಂಡಿದ್ದು , ನಂತರ ವಿಚಾರಣೆ ನಡೆಸಿ ಇಬ್ಬರನ್ನು ಜ.29 ರಂದು ಮಧ್ಯರಾತ್ರಿ ಬೆಳ್ತಂಗಡಿ ನ್ಯಾಯಧೀಶರ ಮನೆಗೆ ಹಾಜರುಪಡಿಸಲಾಯಿತ್ತು , ನ್ಯಾಯಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದು.ಜ.30 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲು ಸೂಚಿಸಿದ್ದಾರೆ.