ಮಂಗಳೂರು: ಈಗಾಗಲೇ ಬಿಜೆಪಿ ಪಕ್ಷದ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ, ವಿಜಯೇಂದ್ರ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಮಾತುಕತೆ ನಡೆದಿತ್ತು.
ಲೋಕಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧೆ ವಿಚಾರ ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ ಹೇಳಿಕೆ.
ಎಲ್ಲರಿಂದಲೂ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ.ಅದರೆ ಇಲ್ಲಿನ ತನಕ ಯಾವ ನಿರ್ಧಾರವನ್ನು ಅವರು ಕೈಗೊಂಡಿಲ್ಲ.ಹಾಗಾಗಿ ಪುತ್ತಿಲ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಬಹಿರಂಗವಾಗಿ ಮಂಡಲ ಅಧ್ಯಕ್ಷ ನೀಡಬೇಕೆಂದು ಬೇಡಿಕೆ ಇಟ್ಟಿದ್ದೆವು.ಅದರೆ ಅದ್ಯಾವುದೂ ಈವರೆಗೆ ಸಫಲವಾಗಿಲ್ಲ.ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾರ್ ಪುತ್ತಿಲ ಸ್ಪರ್ದಿಸಲಿದ್ದಾರೆ.
ಪುತ್ತೂರು ತಾಲೂಕಿನಲ್ಲಿ ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಸಂಘಟನೆ ಇದ್ರೆ ಅದು ಪುತ್ತಿಲ ಪರಿವಾರ ಈಗಾಗಲೇ ನಾವು ಚಾಪು ಮೂಡಿಸಿದ್ದೇವೆ.
ಮುಂದೆ ಇನ್ನೂ ಹೆಚ್ಚು ಸೇವೆ ಸಲ್ಲಿಸುವ ಸಲುವಾಗಿ ನಮ್ಮ ಆರೋಗ್ಯ ಘಟಕದಿಂದ ಬೆಟ್ಟಂಪಾಡಿ ವಿಭಾಗದಲ್ಲಿ ಮಾ.3 ಕ್ಕೆ ಆ್ಯಂಬುಲೆನ್ಸ್ ಸೇವೆ ಆರಂಭಿಸಲಿದ್ದೇವೆ.
ಮುಂದಿನ ದಿನ ಜಿಲ್ಲೆಯಾದ್ಯಂತ ಸಂಘಟನೆ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ ಹಾಗೂ ಸಂಘಟನೆಯನ್ನು ರಾಜ್ಯಕ್ಕೆ ವಿಸ್ತರಿಸಲಿದ್ದೇವೆ.
ಸಮಾಲೋಚನಾ ಸಭೆಯ ಬಳಿಕ ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಸ್ಪರ್ಧೆ ಇರಬೇಕೆಂದು ನಾವು ತೀರ್ಮಾನ ಕೈಗೊಂಡಿದ್ದೇವೆ.
ಮುಂದೆ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ.ರಾಜ್ಯಕ್ಕೂ ಸೇವಾ ಸಂಘಟನೆ ವಿಸ್ತರಣೆ ಮಾಡಲಿದ್ದೇವೆ
ಪತ್ರಿಕಾಗೋಷ್ಠಿಯಲ್ಲಿ ಪರಿವಾರದ ವಕ್ತಾರ ಕೃಷ್ಣ ಉಪಾದ್ಯಾಯ, ಉಪಾದ್ಯಕ್ಷ ಮಹೇಂದ್ರ ವರ್ಮ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕೋಡಿಬೈಲು ಉಪಸ್ಥಿತರಿದ್ದರು.