ಪುತ್ತೂರು: ಯುವಕನೊಬ್ಬ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ಹಾಕಿದ ಘಟನೆ ಕಡಬದಲ್ಲಿ ನಡೆದಿದೆ.
ಆ್ಯಸಿಡ್ ದಾಳಿಗೆ ತುತ್ತಾದವರನ್ನು ವಿಧ್ಯಾರ್ಥಿನಿಯರಾದ ಅಲೀನಾ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯರು ಎಲ್ಲರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದು. ಸರಕಾರಿ ಕಾಲೇಜು ಕಡಬದಲ್ಲಿ ಈ ಘಟನೆ ನಡೆದಿದೆ.
ಆರೋಪಿ ಮಾಸ್ಕ್,ಹ್ಯಾಟ್ ಹಾಕಿ ಬಂದಿದ್ದು, ಶಾಲಾ ವರಾಂಡದಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಈ ಮೂವರ ಮೇಲೆ ಆ್ಯಸಿಡ್ ಹಾಕಿ ಪರಾರಿಯಾಗಿದ್ದಾನೆ.
ಆರೋಪಿ ಕೇರಳದಾತ ಎಂಬುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ವಿದ್ಯಾರ್ಥಿನಿಯರನ್ನು ಕೂಡಲೇ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ವಿಧ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.