ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ನೇಮಕ ಮಾಡಿ ರಾಜ್ಯಪಾಲರ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ.
ಪ್ರೊ.ಪಿ.ಎಲ್ ಧರ್ಮ ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಜೊತೆಗೆ ಸಮೂಹ ಸಂವಹನ ಮತ್ತು ಪ್ರತಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿರುತ್ತಾರೆ.
ಪ್ರೊ.ಪಿ.ಎಲ್ ಧರ್ಮ ಮುಂದಿನ ನಾಲ್ಕು ವರ್ಷಗಳ ಕಾಲ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.