ನವದೆಹಲಿ: ಲೋಕಸಭಾ ಚುನಾವಣೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.
ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.