ಮಂಗಳೂರು: ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆಂದು ಮಾಹಿತಿ ದೊರೆತಿದೆ.
ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಮಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪಕ್ಷದ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದರಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.
ಲೋಕಸಭೆಯ ಚುನಾವಣೆಯ ಕಾವು ಏರುವ ಮೊದಲೇ ಮೋದಿ ಅವರು ಮಾ.16ರಂದು ಕಲಬುರಗಿಗೆ ಆಗಮಿಸಿ ಪಕ್ಷದ ಪರ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅದೇ ದಿನ ಚುನಾವಣಾ ವೇಳಾಪಟ್ಟಿ ಘೋಷಣೆಯಾಯಿತು. ನಂತರ ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಿ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದರು.ಇದೀಗ ಮಂಗಳೂರಿನಲ್ಲಿ ಮೋದಿ ಪ್ರಚಾರ ನಡೆಸುವುದು ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ರವರಿಗೆ ಲಾಭವಾಗಲಿದೆ ಎಂದು ಮೂಲಗಳು ತಿಳಿಸಿವೆ.