ಮಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಯೋಜನೆಗಳನ್ನೇ ಉದ್ಘಾಟನೆ ಮಾಡುತ್ತಿದ್ದಾರೆಯೇ ವಿನಹ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ಒಂದು ಹೊಸ ಯೋಜನೆ ತಂದಿಲ್ಲ ಎಂದು ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಬರಗಾಲದ ಸಮಸ್ಯೆ ಎದುರಾಗುತ್ತಿದ್ದರು ಅದನ್ನು ನಿರ್ವಹಣೆ ಮಾಡದೆ ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ಸರ್ಕಾರ ಗೂಬೆಕೂರಿಸುತ್ತಿದೆ.
ಕಾಂಗ್ರೆಸ್ ನವರು ಎಸ್ಡಿಪಿಐ ಜೊತೆ ಸೇರಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ ಈ ಕಾರಣದಿಂದಲೇ ಎಸ್ಡಿಪಿಐ ಈ ಬಾರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಇಬ್ಬರೂ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಶಾಸಕ ವೈ ಭರತ್ ಶೆಟ್ಟಿ ಹೇಳಿದರು.