ಮಂಗಳೂರು: ನೇಹಾ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು. ಇಡೀ ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ವಿ ಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಅಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ನೇಹಾಳ ತಂದೆ ಈ ಕೊಲೆ ಲವ್ ಜಿಹಾದ್ ನಿಂದ ಆಗಿದ್ದು ಎಂದು ಹೇಳಿದ್ದಾರೆ. ನೇಹಾಳಿಗೆ ನಿರಂತರ ಕಿರುಕುಳ ನೀಡಿರುವ ಬಗ್ಗೆ, ಹೇಳಿಕೆ ಕೊಟ್ಟಿದ್ದಾರೆ.
ಹಾಡು ಹಗಲೇ ಕಾಲೇಜಿನ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಎದುರು ಯುವತಿಯನ್ನು ಅಮಾನುಷವಾಗಿ ಹತ್ಯೆ ನಡೆಸಲಾಗಿದೆ. ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತರಾಗಿಲ್ಲ.
ರಾಜ್ಯದಲ್ಲಿ ಕಾಂಗ್ರೆಸ್ ನ ತುಘಲಕ್ ದರ್ಬಾರ್ ನಡೆಯುತ್ತಿದೆ. ಆತ್ಮರಕ್ಷಣೆಗೆ ಯುವತಿರು, ಮಹಿಳೆಯರು ಕಿರುಕತ್ತಿಯನ್ನು ಇಟ್ಟುಕೊಳ್ಳಲು ಅನುಮತಿ ನೀಡಬೇಕು.
ಪಂಜಾಬ್ ನ ಯುವತಿಯರು ಮಹಿಳೆಯರು ಆತ್ಮರಕ್ಷಣೆಗೆ ಧರಿಸುವ ಕಿರುಕತ್ತಿ ಕಿರ್ಪಣ್ ಇಟ್ಟುಕೊಳ್ಳುತ್ತಾರೆ. ಅದೇ ರೀತಿ ಕರ್ನಾಟಕದಲ್ಲೂ ಮಹಿಳೆಯರು ತಮ್ಮ ಆತ್ಮರಕ್ಷಣೆಗೆ ಕಿರುಕತ್ತಿ ಹೊಂದಲು ಕಾನೂನು ತರಬೇಕು. ಎಂದು ವಿ ಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಒತ್ತಾಯ ಮಾಡಿದ್ದಾರೆ.
ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ. ಘಟನೆಗೆ ವಿಶ್ವಹಿಂದೂ ಪರಿಷತ್ ಬಜರಂಗದಳ ಖಂಡಿಸಿದೆ. ಈ ಪ್ರರಣವನ್ನು ಎನ್ ಐ ಎ ಗೆ ನೀಡುವಂತೆ ವಿ ಎಚ್ ಪಿ, ಬಜರಂಗದಳ ಒತ್ತಾಯ ಪಡಿಸಿದೆ.