ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದರು.
ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜು ರಥಬೀದಿಯಲ್ಲಿ ಮತದಾನ ಮಾಡಿದರು. ಸರತಿ ಸಾಲಿನಲ್ಲಿ ನಿಂತು ಅವರು ತಮ್ಮ ಹಕ್ಕು ಚಲಾಯಿಸಿದರು. ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಕಂಡು ಮತದಾರರು ಬ್ರಿಜೇಶ್ ಚೌಟರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಸ್ವತಃ ಬ್ರಿಜೇಶ್ ಚೌಟರೇ ಮೊಬೈಲ್ ಪಡೆದು ಸೆಲ್ಫಿ ಕ್ಲಿಕ್ಕಿಸಿಕೊಂಡರು. ಬ್ರಿಜೇಶ್ ಚೌಟ ಅವರು ತಮ್ಮ ತಾಯಿ – ತಂದೆಯರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.