ಮಂಗಳೂರು: ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ಗಾಂಧಿನಗರದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೂತ್ ನಂಬರ್ 86 ರಲ್ಲಿ ಕುಟುಂಬ ಸಮೇತ ಮತ ಚಲಾಯಿಸಿದರು.
ರಾಷ್ಟ್ರದ ಪ್ರಗತಿಗಾಗಿ ಪ್ರತಿಯೊಬ್ಬರೂ ಮತ ಚಲಾಯಿಸಿ ತಮ್ಮ ಕರ್ತವ್ಯವನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಅತೀ ದೊಡ್ಡ ಕಾರ್ಯದಲ್ಲಿ ಜವಾಬ್ದಾರಿಯಿಂದ ಭಾಗವಹಿಸೋಣವೆಂದು ಕರೆ ನೀಡಿದರು.