ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಕಾದಿರಿಸದ ಟಿಕೆಟ್ಗಳನ್ನು ಸ್ವಯಂಚಾಲಿತ 43883 ಯಂತ್ರ(ಎಟಿವಿಎಂ) ಅಳವಡಿಸಲಾಗಿದೆ. ಇದರಲ್ಲಿ ಈ ಹಿಂದೆಸಹಾಯಕರನ್ನು ನಿಯೋಜಿಸಿ ಟಿಕೆಟ್ಗಳನ್ನು ವಿತರಿಸಲಾಗು ತ್ತಿದ್ದರೂ ಕೋವಿಡ್ ಅವಧಿಯಲ್ಲಿ ಈ ಸೇವೆ ರದ್ದುಗೊಂಡಿತ್ತು.
ಇದೀಗ ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ಈ ಯಂತ್ರದ ಗರಿಷ್ಠ ಪ್ರಮಾಣದಲ್ಲಿ ಬಳಕೆಯಾಗಬೇಕು ಎನ್ನುವ ಉದ್ದೇಶದಿಂದ ಸಹಾಯಕರನ್ನು ನಿಯೋಜಿಸಿ ಟಿಕೆಟ್ ವಿತರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದೆ. ಅದರಂತೆ ಮೊದಲ ಹಂತದಲ್ಲಿ ಎಟಿವಿಎಂ ಇರುವ ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಮತ್ತು ಕಾಸರಗೋಡು ಸಹಿತ ವಿಭಾಗ ವ್ಯಾಪ್ತಿಗೆ 300 ಸಹಾಯಕರನ್ನು ನಿಯೋಜಿಸಲು ಮುಂದಾಗಿದೆ.
ಪ್ರತಿದಿನ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ 8 ಲಕ್ಷ ರೂ. ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ 2 ಲಕ್ಷ ರೂ. ಮೌಲ್ಯದ ಕಾದಿರಿಸದ ಟಿಕೆಟ್ ವಿತರಣೆ ಆಗುತ್ತಿದೆ. ಇನ್ನು ಮುಂದೆ ಇದನ್ನು ಸಂಪೂರ್ಣವಾಗಿ ಎಟಿವಿಎಂ ಮೂಲಕವೇ ವಿತರಿಸುವುದು ಇಲಾಖೆಯ ಗುರಿ. ಮಂಗಳೂರು ಸೆಂಟ್ರಲ್ಗೆ 21 ಮತ್ತು ಜಂಕ್ಷನ್ಗೆ 9 ಸಿಬಂದಿ ನಿಯೋಜಿಸಲು ಉದ್ದೇಶಿಸಲಾಗಿದ್ದು, ದಿನದ 24 ಗಂಟೆಯೂ ಪ್ರಯಾಣಿಕರಿಗೆ ಈ ಸೇವೆ ದೊರೆಯಲಿದೆ.
ಒಂದು ವರ್ಷದ ಒಪ್ಪಂದದ ಆಧಾರದಲ್ಲಿ ಸಹಾಯಕರ ನೇಮಕಾತಿ ನಡೆಯಲಿದ್ದು, ಇವರು ರೈಲ್ವೇ ಇಲಾಖೆಯ ನೌಕರರಲ್ಲ. ಟಿಕೆಟ್ ಮಾರಾಟದ ಮೇಲಿನ ಕಮಿಷನ್ ಆಧಾರದಲ್ಲಿ ಈ ಸಹಾಯಕರ ಆದಾಯ ಪಡೆಯಲಿದ್ದಾರೆ. ಇದಕ್ಕಾಗಿ ರೈಲ್ವೇ ಅರ್ಜಿ ಆಹ್ವಾನಿಸಿದ್ದು, http://www.sr.indianrailways.gov.in ನಲ್ಲಿ ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. 18 ವರ್ಷ ಮೇಲ್ಪಟ್ಟ ಎಸೆಸೆಲ್ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 24 ಕೊನೇ ದಿನಾಂಕ ಎಂದು ರೈಲ್ವೇ ಇಲಾಖೆ ತಿಳಿಸಿದೆ.