ಮಂಗಳೂರು : ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರ ನಡುವೆ ಗಲಾಟೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ನಿಲ್ದಾಣದ ಹೊರಗೆ ನಡೆದ ಗಲಾಟೆಯಲ್ಲಿ ಮಹಿಳೆಯರು ಎಂಬುದನ್ನೂ ನೋಡದೆ ಅಸಭ್ಯವಾಗಿ ವರ್ತಿಸಿ ರಿಕ್ಷಾ ಚಾಲಕರು ಹೊಡೆದಾಟಕ್ಕಿಳಿದಿರುವುದು ಕಂಡು ಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಚೆನ್ನೈನಿಂದ ದಂಪತಿಗಳು ಬಂದಿದ್ದು ಅವರನ್ನು ಕರೆದುಕೊಂಡು ಇಬ್ಬರು ಬೈಕ್ ನಲ್ಲಿ ಬಂದಿದ್ದರು. ಈ ವೇಳೆ ರೈಲ್ವೆ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ನಿಗದಿತ ಸ್ಥಳದಲ್ಲಿ ಮಾಡಬೇಕಾಗಿರುವ ಹಿನ್ನಲೆ ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ನೋಡಿಕೊಳ್ಳುತ್ತಿರುವ ಚಂದನ್ ಎನ್ನುವ ವ್ಯಕ್ತಿ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಈ ವೇಳೆ ಅಲ್ಲೆ ಇದ್ದ ರಿಕ್ಷಾ ಚಾಲಕರು ಚಂದನ್ ಗೆ ಬೆಂಬಲವಾಗಿಲ ಬಂದು ಗಲಾಟೆ ಮಾಡಿದ್ದಾರೆ. ವಾಗ್ವಾದ ತಾರಕಕ್ಕೇರಿದ್ದು, ತಳ್ಳಾಟ ನೂಕಾಟ ನಡೆದಿದೆ.
ಆಟೋ ಚಾಲಕರ ಗುರುತನ್ನು ಪರಿಶೀಲಿಸಲಾಗಿದೆ. ಪ್ರಯಾಣಿಕರ ಗುರುತನ್ನೂ ಪರಿಶೀಲಿಸಲಾಗುತ್ತಿದೆ.ಈ ವಿಷಯದಲ್ಲಿ ಲಭ್ಯವಿರುವ ಎಲ್ಲಾ ಸಂಗತಿಗಳನ್ನು ಆಧರಿಸಿ ಸೂಕ್ತ ಕ್ರಮವನ್ನು ತ್ವರಿತವಾಗಿ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.