ದಕ್ಷಿಣ ಕನ್ನಡ: ಕೊನೆಗೂ ರಾಜ್ಯದಲ್ಲಿ ಮಳೆ ಆರ್ಭಟ ಪ್ರಾರಂಭವಾಗುವ ಮುನ್ಸೂಚನೆ ಬಂದಿದ್ದು, ಮುಂಗಾರು ಪೂರ್ವದ ಮಳೆ ಆರಂಭವಾಗುವ ಸಾಧ್ಯತೆ ಇದ್ದು, ಇದೇ 11ರಿಂದ 14ರ ವರೆಗೆ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತದ ಪ್ರಭಾವ ಬೀರುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಮೇ 11ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 12ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 13ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಹಾಗೂ ಮೇ 14ರಂದು ವಿಜಯಪುರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಭಾರಿ ಮಳೆಯ ಮುನ್ಸೂಚನೆ ನೀಡಿರುವ ಕೆಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ಹಾಗೂ ಮತ್ತೆ ಕೆಲವು ಕಡೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.