ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನಕ್ಕೆ ಸಂತಸ ವ್ಯಕ್ತಪಡಿಸಿದ ಪ್ರವೀಣ್ ನೆಟ್ಟಾರ್ ಪತ್ನಿ ನೂತನ.
ಆರೋಪಿ ಮುಸ್ತಫಾ ಪೈಚಾರ್ ಬಂಧನದ ಕುರಿತು ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಪ್ರತಿಕ್ರಿಯಿಸಿ, ಮುಸ್ತಫಾ ಪೈಚಾರ್ ಈ ಪ್ರಕರಣದ ಪ್ರಮುಖ ಆರೋಪಿ ಅವನು ಸಿಕ್ಕಿದ್ದಾನೆ. ನಮಗೆ ತುಂಬಾ ಖುಷಿಯಾಗಿದೆ.ಈ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣ ದಂಡನೆಯಾಗಬೇಕು.ಮುಂದೆ ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು.ಇಡೀ ದೇಶದಲ್ಲೇ ಈ ಪ್ರಕರಣ ಅಂತಿಮ ಪ್ರಕರಣ ಆಗಬೇಕು.ನಮ್ಮ ಕುಟುಂಬದವರಿಗೆ ತುಂಬಾ ಸಂತಸದ ಸುದ್ದಿ.ನಮ್ಮ ಕುಟುಂಬ ಸಮಾಜದವರ ಪರವಾಗಿ ಎನ್ ಐ ಎ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ.
ಪ್ರಕರಣ ನಡೆದು ಎರಡು ವರ್ಷವಾದರೂ ಆರೋಪಿಗಳನ್ನ ಬಂಧಿಸಲು ಎನ್ ಐ ಎ ಅಧಿಕಾರಿಗಳು ತುಂಬಾ ಪ್ರಯತ್ನ ಪಡುತ್ತಿದ್ದಾರೆ.
ಎನ್ ಐ ಎ ಸಂಸ್ಥೆಯ ಮೇಲೆ ನಂಬಿಕೆ ಇದೆ.ಎಲ್ಲ ಆರೋಪಿಗಳ ಬಂಧನವಾಗುತ್ತೆ ಅನ್ನೋ ವಿಶ್ವಾಸವಿದೆ.ಈ ಪ್ರಕರಣದ ಆರೋಪಿಗಳಿಗೆ ನೀಡುವ ಶಿಕ್ಷೆ ಒಂದು ಪಾಠವಾಗಬೇಕು ಎಂದು ನೂತನ ಹೇಳಿದರು.