ಮಂಗಳೂರು: ಉಳ್ಳಾಲದ ಮಾಜಿ ಶಾಸಕ ದಿ.ಇದ್ದಿನಬ್ಬ ಮೊಮ್ಮಗನ ಐಸಿಸ್ ನಂಟು ಕೇಸ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಿ.ಇದ್ದಿನಬ್ಬ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.
ಅಗಸ್ಟ್ 21, 2021ರಂದು ಯುಎಪಿಎ ಕಾಯ್ದೆಯಡಿ ಐಸಿಸ್ ನಂಟಿನ ಆರೋಪದಡಿ ದಿ.ಇದ್ದಿನಬ್ಬ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಬಂಧಿಸಿದ್ದ ರಾಷ್ಟ್ರೀಯ ತನಿಖಾ ದಳ.
ಆದರೆ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಅಮ್ಮರ್ ಅಬ್ದುಲ್ ರೆಹಮಾನ್ ವಿಚಾರಣಾಧೀನ ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು.
ಸದ್ಯ ಸುಧೀರ್ಘ ವಿಚಾರಣೆ ಬಳಿಕ ದೆಹಲಿ ಹೈಕೋರ್ಟ್ ಜಾಮೀನು ಅಮ್ಮರ್ ಅಬ್ದುಲ್ ರೆಹಮಾನ್ ಜಾಮೀನು ಆದೇಶದಲ್ಲಿ ಹಲವು ಅಂಶ ಉಲ್ಲೇಖಿಸಿದ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.
‘ಉಗ್ರ ಸಂಘಟನೆ ಜೊತೆಗಿನ ಆಕರ್ಷಣೆಯನ್ನ ಉಗ್ರ ನಂಟು ಎನ್ನಲು ಆಗಲ್ಲ.ಐಸಿಸ್ ಪರ ವಿಡಿಯೋ ಡೌನ್ ಲೋಡ್, ಭಾಷಣ ಆಲಿಸೋದು ಯುಎಪಿಎ ಕಾಯ್ದೆಯಡಿ ತರಲು ಆಗಲ್ಲ. ಈ ಸಾಕ್ಷ್ಯ ಬಳಸಿ ಯುಎಪಿಎ ಸೆಕ್ಷನ್ 38 ಮತ್ತು 39 ರಡಿ ತರಲು ಬರಲ್ಲ. ಆರೋಪಿ ಮೊಬೈಲ್ ನಲ್ಲಿ ಲಾಡೆನ್, ಐಸಿಸ್ ಬಾವುಟಗಳು, ಐಸಿಸ್ ಪರ ಭಾಷಣಗಳ ತುಣುಕು ಸಿಕ್ಕಿದೆ. ಆದರೆ ಇದೆಲ್ಲದರ ಮೂಲಕ ಆತನಿಗೆ ಐಸಿಸ್ ನಂಟಿದೆ ಎನ್ನಲು ಆಗಲ್ಲ’ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಇವುಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್ ನಲ್ಲಿ ಸಿಗುತ್ತದೆ. ಕುತೂಹಲ ಇರೋ ಯಾರು ಬೇಕಾದರೂ ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಬಹುದು. ಹಾಗಾಗಿ ಇದನ್ನು ಇಟ್ಟುಕೊಂಡು ಐಸಿಸ್ ನಂಟನ್ನು ಸಾಬೀತು ಪಡಿಸಲು ಆಗಲ್ಲ’ಐಸಿಸ್ ನಂಟಿನ ಆರೋಪ ಕೇಸ್ ನಲ್ಲಿ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈಗಾಗಲೇ ಪ್ರಕರಣ ಸಂಬಂಧ ಹಲವು ಜನರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿರೋ ಎನ್ ಐಎ. ಮಾರ್ಚ್ 5, 2021ರಲ್ಲಿ ದೆಹಲಿ ಎನ್ ಐಎ ದಾಖಲಿಸಿದ್ದ ಸ್ವಯಂಪ್ರೇರಿತ ಎಫ್ ಐಆರ್. ಇದೀಗ ಐಸಿಸ್ ನಂಟಿನ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆ ಅಮ್ಮರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.