ಮಂಗಳೂರು : ಉಡುಪಿಯ ಅಭಿವೃದ್ಧಿಯಲ್ಲಿ ತನ್ನ ಪಾತ್ರ ಇದೆ.ಆರೋಗ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ತಾನು ಸಾಧನೆ ಮಾಡಿದ್ದೇನೆ ಶಾಸಕನಾಗಿ ಮಾಡಬೇಕಾದ ಕೆಲ್ಸಗಳನ್ನು ನಾನು ಮಾಡಿದ್ದೇನೆ. ಆದರೆ ಕೊನೆಗೆ ನನಗೆ ಟಿಕೆಟನ್ನು ನಿರಾಕರಿಸಲಾಯಿತು ಎಂದು ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ರಘುಪತಿ ಭಟ್ ಸುದ್ದಿಗೋಷ್ಟಿ ನಡೆಸಿ ಶಾಸಕ ಅವಧಿಯಲ್ಲಿ ತಾನು ಮಾಡಿದ ಕಾರ್ಯದ ಬಗ್ಗೆ ಮಾತನಾಡಿದ ಭಟ್ ನನ್ನನ್ನು ನಡೆಸಿಕೊಂಡ ರೀತಿ ನನಗೆ ಬೇಸರ ಮೂಡಿಸಿತು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ನಿರಾಕರಿಸಲಾಯಿತು
ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ತನ್ನನ್ನು ಬೆಂಬಲಿಸುವಂತೆ ಮಂಗಳೂರಲ್ಲಿ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಮನವಿ ಮಾಡಿದ್ದಾರೆ.