ಮಂಗಳೂರು : ಅಧಿಕಾರಕ್ಕೆ ನಾನು ಪೊಲೀಸರಿಗೆ ಬೈದಿಲ್ಲ ಕಾರ್ಯಕರ್ತರ ಶಕ್ತಿಗಾಗಿ ಪೊಲೀಸರಿಗೆ ಬೈದದ್ದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.
ಪ್ರಕರಣದಲ್ಲಿ ಇಲ್ಲದ ಒಬ್ಬ ಅಮಾಯಕನನ್ನು ಬಂಧನವಾಗಿದೆ. ಬಿಜೆಪಿಯಲ್ಲಿ ಮುಂಚೂಣಿಯಲ್ಲಿ ಇದ್ದಾನೆ ಎಂದು ಬಂಧನ ಮಾಡಿದ್ದಾರೆ. ಅದನ್ನು ನಾನು ಜನ ಪ್ರತಿನಿಧಿಯಾಗಿ ಖಂಡಿಸಿರುವುದು. ದ್ವೇಷದ ರಾಜಕಾರಣ ಮಾಡಿದ್ರೆ ಒಪ್ಪುದಿಲ್ಲ ಎಂದು ಪೊಲೀಸರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವುದು. ಅದನ್ನೇ ನೆಪವಾಗಿ ಇಟ್ಟು ಮೂರು ಕೇಸ್ ಹಾಕಿದ್ದಾರೆ. ಅಧಿಕಾರಕ್ಕೆ ನಾನು ಪೊಲೀಸರಿಗೆ ಬೈದಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಕಾಲರ್ ಪಟ್ಟಿ ಹಿಡಿದಿಲ್ವಾ. ಕಾರ್ಯಕರ್ತರ ಶಕ್ತಿಗಾಗಿ ಪೊಲೀಸರಿಗೆ ಬೈದದ್ದು ಅಧಿಕಾರಕ್ಕಾಗಿ ಅಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ಗೆ ನೈತಿಕತೆ ಇಲ್ಲ. ಪೊಲೀಸರ ಮೇಲೆ ಹೆಚ್ಚಿನ ದೌಜನ್ಯ ಮಾಡಿರುವುದು ಕಾಂಗ್ರೆಸ್. ಬಿಜೆಪಿ ನಾಯಕರಿಗೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ತುರ್ತು ಪರಿಸ್ಥಿತಿಯಿಂದ ಹಿಡಿದು ಅವತಿನಿಂದ ಇವತ್ತಿನ ವರೆಗೆ ಪೊಲೀಸರನ್ನು ಹಿಡಿದುಕೊಂಡು ಕಾಂಗ್ರೆಸ್ ದೌಜನ್ಯ ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತಲ್ವಾ. ಆವಾಗ ಯಾವ ನ್ಯಾಯ ಕಾನೂನು ಇತ್ತು. ಬಿಜೆಪಿ ಕಾರ್ಯಕರ್ತನಿಗೆ ಅನ್ಯಾಯ ಆದಾಗ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಇದು ಯಾವ ನ್ಯಾಯ. ಎಂದು ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯ ಬೆಳ್ತಂಗಡಿಗೆ ಬಂದ ಮೇಲೆ FIR ಮಾಡಿದ್ದಾರೆ.ತಾಕತ್ತು ಇದ್ರೆ ಬರುದಕ್ಕೆ ಮೊದಲು ಕೇಸ್ ಹಾಕಬಹುದಿತಲ್ವಾ. ಬಿಜೆಪಿ ಕಾರ್ಯಕರ್ತರನ್ನು ಮುಟ್ಟುವ ತಾಕತ್ತು ಇಲ್ಲ. ನಾನು ಹೈಕೋರ್ಟ್ ನಲ್ಲಿ ಕಾನೂನು ವೃತ್ತಿ ಮಾಡಿ ಬಂದವನು, ಕಾನೂನಿನ ಬಗ್ಗೆ ಪೊಲೀಸ್ ಇಲಾಖೆ ಪಾಠ ಮಾಡುವ ಅಗತ್ಯ ಇಲ್ಲ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.