ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷ ಸಾಧನೆಯ ಕೆಲಸ ಮಾಡುತ್ತಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ ಮಾಡುವ ಮುನ್ನ ರಾಜ್ಯದಲ್ಲಿ ಆಗುತ್ತಿರುವ ಕೊಲೆ,ಸುಲಿಗೆ,ಭಯೋತ್ಪಾದನೆಯನ್ನು ಮಟ್ಟಹಾಕಿ ರಾಜ್ಯವನ್ನು ಮೊದಲು ರಕ್ಷಿಸಿ ಎಂದವರು ಅಧಿಕಾರಾರೂಢ ಕಾಂಗ್ರೆಸ್ಸಿಗೆ ಬುದ್ದಿ ಮಾತು ಹೇಳಿದ್ದಾರೆ. ವಿಧಾನ ಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್ ಹೇಳಿದವರನ್ನು ಬಂಧಿಸಿ ನಿಮ್ಮ ತಾಕತ್ತು ಪ್ರದರ್ಶಿಸಿ ಎಂದೂ ಅವರು ಸವಾಲು ಹಾಕಿದ್ದಾರೆ.