ಬೆಂಗಳೂರು : ರೌಡಿಗಳು ಪೊಲೀಸರಿಗೆ ಹೆದರಬೇಕು. ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿದೆ ಎಂದು ಕೆಲವು ಪೊಲೀಸರಿಗೆ ತಿಳಿದಿಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
“ನಿಮಗೆ ಬಂದೂಕುಗಳನ್ನು ಏಕೆ ನೀಡಲಾಗಿದೆ? ಇದಕ್ಕೆ ರೌಡಿಗಳು ಏಕೆ ಹೆದರುವುದಿಲ್ಲ ಎಂದು ಇಲ್ಲಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸರನ್ನು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ನೂತನ ತಂತ್ರಾಂಶವನ್ನು ಬಿಡುಗಡೆ ಮಾಡಿದರು.
“ಮಾದಕ ದ್ರವ್ಯ ವ್ಯಾಪಾರಿಗಳು ಯಾರು? ರೌಡಿಗಳು ಮತ್ತು ರಿಯಲ್ ಎಸ್ಟೇಟ್ ಏಜೆಂಟ್ಗಳು ಯಾರೆಂಬುದು ಆಯಾ ಠಾಣೆಯ ಅಧಿಕಾರಿಗಳಿಗೆ ತಿಳಿದಿದೆ. ಇದು ಏಕೆ ನಿಲ್ಲುತ್ತಿಲ್ಲ ಎಂದು ಪ್ರಶ್ನಿಸಿದರು.
ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಗೃಹ ಸಚಿವ ಜಿ.ಪರಮೇಶ್ವರ ಹಾಗೂ ಕರ್ನಾಟಕ ಪೊಲೀಸರನ್ನು ಅಭಿನಂದಿಸಿದರು.
ಪೊಲೀಸ್ ಕೈಪಿಡಿಯಂತೆ ಪ್ರತಿಯೊಬ್ಬ ಎಸ್ಪಿ-ಡಿಸಿಪಿ-ಐಜಿ ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.