ಮಂಗಳೂರು : ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು CA ಪೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆಗಸ್ಟ್ 10 ರಂದು ನಡೆಯಿತು.
ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಶ್ರೀ ಗಂಗಾಧರ ಈ ಮಂಡಗಳಲೆಯವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿರುವ ವಿಫುಲವಾದ ಉದ್ಯೋಗವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕಗುಣವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ವಿದ್ವತ್ ಪಿಯು ಕಾಲೇಜಿನ ಆಡಳಿತ ಅಧಿಕಾರಿಗಳಾದ ಶ್ರೀ ಚಂದ್ರಶೇಖರವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ಈಗಿನಿಂದಲೇ ನಡೆಸಬೇಕೆಂದು ತಿಳಿಹೇಳಿದರು.
ವಿದ್ವತ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೋರವರು ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯುವ CA ಪೌಂಡೇಶನ್ ತರಬೇತಿಯ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತೃತ ಮಾಹಿತಿಯನ್ನು ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿಯನ್ನು ನಡೆಸಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಜಯೇಂದ್ರ ಬಂದ್ಯಾನ್, ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ. ಮಹಿತ ಕುಮಾರಿ, ಕನ್ನಡ ವಿಭಾಗದ ಉಪನ್ಯಾಸಕರಾದ ಶ್ರೀ ನೀಲಕಂಠ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲ ವಿಭಾಗದ ಉಪನ್ಯಾಸಕರಾದ ಶ್ರೀ ಆಶಿಕ್ ಬಾಲಚಂದ್ರ ನಿರೂಪಿಸಿದರು.