ಬಹುಭಾಷಾ ಗಾಯಕ ಅರ್ಮಾನ್ ಮಲಿಕ್ ತಮ್ಮ ಬಹುಕಾಲದ ಗೆಳತಿ ಆಶ್ನಾ ಶ್ರಾಫ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಗಾಯಕ ಅರ್ಮಾನ್ ಮಲಿಕ್ ಈ ಕುರಿತ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಿಂದ ರಿಲೇಷನ್ ಶಿಪ್ ನಲ್ಲಿದ್ದ ಈ ಜೋಡಿ ಇದೀಗ ಕುಟುಂಬಸ್ಥರ ಸಮ್ಮುಖದಲ್ಲಿ ಎಂಗೇಜ್ ಆಗಿದ್ದಾರೆ.
ಅರ್ಮಾನ್ ತಮ್ಮ ಜೀವದ ಗೆಳತಿ ಆಶ್ನಾ ಅವರಿಗೆ ಮಂಡಿಯೂರಿ ಬೆಋಳಿಗೆ ಉಂಗುರ ತೊಡಿಸಿದ್ದಾರೆ. ಈ ಚಂದದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ಯಾಂಡಲ್ ವುಡ್ ನಲ್ಲಿ ಹಲವಾರು ಸಿನಿಮಾಗಳಿಗೆ ಧ್ವನಿಯಾಗಿದ್ದು, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.