ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಭಾರತ 8ನೇ ಬಾರಿಗೆ ಏಷ್ಯಾಕಪ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
ಇಂದು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಭಾರತೀಯ ಬೌಲರ್ ಗಳ ಬೌಲಿಂಗ್ ಗೆ ತತ್ತರಿಸಿ ಹೋಗಿದ್ದರು. ಲಂಕಾ ಕೇವಲ 50 ರನ್ ಗಳಿಗೆ ಆಲೌಟ್ ಆಗಿದ್ದು, ಭಾರತಕ್ಕೆ 51 ರನ್ ಗಳ ಗುರಿ ನೀಡಿತ್ತು. ಈ ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಭಾರತ 6.1 ಓವರ್ ಗೆ ವಿಕೆಟ್ ನಷ್ಟವಿಲ್ಲದೆ 51 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.
ಭಾರತ ತಂಡದಿಂದ ಆರಂಭಿಕ ಆಟಗಾರರಾಗಿ ಇಶಾನ್ ಕಿಶನ್ ಹಾಗೂ ಶುಭಮನ್ ಗಿಲ್ 51 ರನ್ ಗಳ ಗುರಿ ಮುಟ್ಟಿ ಗೆದ್ದು ಬೀಗಿದ್ದಾರೆ. ಈ ಮೂಲಕ ಭಾರತ 8ನೇ ಬಾರಿಗೆ ಏಷ್ಯಾಕಪ್ ಗೆದ್ದುಕೊಂಡಿದೆ.