ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 2023-24ನೇ ಸಾಲಿನ ಚುನಾವಣೆ ಶನಿವಾರ ನಡೆದಿದ್ದು, ಅಧ್ಯಕ್ಷರಾಗಿ ಎನ್ ಎಮ್ ಸುರೇಶ್ ಆಯ್ಕೆಯಾಗಿದ್ದಾರೆ. ಇನ್ನು ಕಾರ್ಯದರ್ಶಿಯಾಗಿ ಬಾ. ಮಾ ಗಿರೀಶ್ ಆಯ್ಕೆಯಾಗಿದ್ದಾರೆ.
ಖಜಾಂಚಿಯಾಗಿ ಜಯಸಿಂಹ ಮಸೂರಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಪ್ರಮೀಳಾ ಜೋಷಾಯ್ ನೇಮಕಗೊಂಡಿದ್ದಾರೆ.
ಶನಿವಾರ ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಮತದಾನ ರೇಸ್ ಕೋರ್ಸ್ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ನಡೆದಿದೆ.
ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟಿದ್ದು, ಸ್ಪರ್ಧಾ ಕಣದಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿರುವ ನಿರ್ಮಾಪಕರಾದ ಎನ್.ಎಮ್. ಸುರೇಶ್, ಶಿಲ್ಪಾ ಶ್ರೀನಿವಾಸ್, ಮಾರ್ಸ್ ಸುರೇಶ್, ಎ. ಗಣೇಶ್ ಇದ್ದರು.