ಚೀನಾದ ಹ್ಯಾಂಗಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್ಗೆ ಶನಿವಾರ ಅಧಿಕೃತ ಚಾಲನೆ ಸಿಕ್ಕಿದ್ದು, ಮೊದಲ ದಿನವೇ ಭಾರತಕ್ಕೆ 2 ಬೆಳ್ಳಿ ಪದಕ ಲಭಿಸಿವೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್ ನಲ್ಲಿ ಭಾರತ ಒಟ್ಟು 1886 ಅಂಕಗಳೊಂದಿಗೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದೆ.
ರಮಿತಾ, ಮೆಹಿಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರು 2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಪಡೆದುಕೊಟ್ಟಿದ್ದು, ಚೀನಾ 1896.6 ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡರೆ, ಮಂಗೋಲಿಯಾ ಒಟ್ಟು 1880 ಅಂಕಗಳೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.
ಭಾರತದ ಅರ್ಜುನ್ ಜತ್ ಲಾಲ್ ಮತ್ತು ಅರವಿಂದ್ ಸಿಂಗ್ ಜೋಡಿಯು ಪುರುಷರ ಲೈಟ್ವೇಟ್ ಡಬಲ್ ಸ್ಕಲ್ಸ್ನ ಫೈನಲ್ A ನಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿತು. 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್ಗೆ ಪ್ರವೇಶಿಸಿದ ಅರ್ಜುನ್ ಲಾಲ್, ಅರವಿಂದ್ ಸಿಂಗ್ ಅವರೊಂದಿಗೆ ಶ್ಲಾಘನೀಯ ಪ್ರದರ್ಶನವನ್ನು ನೀಡುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು.
ಲೇಖ್ ರಾಮ್ ಮತ್ತು ಬಾಬು ಲಾಲ್ ಯಾದವ್ ಪುರುಷರ ಜೋಡಿ ಫೈನಲ್ನಲ್ಲಿ ಮೂರನೇ ಸ್ಥಾನ ಗಳಿಸುವ ಮೂಲಕ ಕಂಚಿನ ಪದಕ ಗೆದ್ದು, ಭಾರತಕ್ಕೆ ಮೂರನೇ ಪದಕ ತಂದುಕೊಟ್ಟಿದ್ದಾರೆ.