ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ಸ್ ನಲ್ಲಿ ಶ್ರೀಲಂಕಾ ತಂಡವನ್ನು ಭಾರತ ಮಹಿಳಾ ತಂಡ ಮಣಿಸಿ ಐತಿಹಾಸಿಕ ಚಿನ್ನದ ಪದಕ ಬಾಚಿಕೊಂಡಿದೆ.
ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಭಾರತ ಚಿನ್ನದ ಪದಕ ಗಿಟ್ಟಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಶ್ರೀಲಂಕಾಗೆ ಗೆಲ್ಲಲು ಕೇವಲ 117 ರನ್ ಗಳ ಗುರಿ ನೀಡಿತ್ತು. ಭಾರತದ ವನಿತೆಯರ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 116 ರನ್ ಗಳನ್ನಷ್ಟೇ ಕಲೆಹಾಕಿದೆ.
ಶ್ರೀಲಂಕಾ ತಂಡ ಗೆಲ್ಲಲು 20 ಓವರ್ ನಲ್ಲಿ 117ರನ್ ಕಲೆಹಾಕಬೇಕಿದೆ. ಭಾರತ ನೀಡಿದ 118ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಶ್ರೀಲಂಕಾ ವನಿತೆಯರ ತಂಡ ನಿಗದಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 97ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 19ರನ್ ಗಳ ಅಂತರದಲ್ಲಿ ಸೋಲು ಕಂಡಿತು. ಆರಂಭಿಕ ಹಂತದಲ್ಲಿ ಬಿದ್ದ ಸತತ ವಿಕೆಟ್ ಗಳು ಶ್ರೀಲಂಕಾ ತಂಡಕ್ಕೆ ಮುಳುವಾಯಿತು.
ಭಾರತ ಪರ ಟಿಟಾಸ್ ಸಧು 3 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರೆ, ರಾಜೇಶ್ವರಿ ಗಾಯಕ್ವಾಡ್ 2, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್ ಮತ್ತು ದೇವಿಕಾ ವೈದ್ಯ ತಲಾ 1 ವಿಕೆಟ್ ಪಡೆದರು.