ಮಂಗಳೂರು: ಕರ್ನಾಟಕದ ನಾಲ್ಕನೇ ಹಾಗೂ ಕರಾವಳಿಯ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ
ಅಯೋಧ್ಯೆಯಿಂದ ಅಧಿಕೃತ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
ಕರ್ನಾಟಕದ ನಾಲ್ಕನೇ ಹಾಗೂ ಕರಾವಳಿಯ ಮೊದಲ ವಂದೇ ಭಾರತ್ ರೈಲಿಗೆ ಅಯೋಧ್ಯೆಯಿಂದ ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಚಾಲನೆ ನೀಡಿದ್ದಾರೆ. ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ್ರು. ಸಾವಿರಾರು ಬಿಜೆಪಿ ಕಾರ್ಯಕರ್ತರು, ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಾರ್ಯಕ್ರಮ ಮುಗಿದ ಬಳಿಕ ಮಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಾಯ್ತು. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ನೂರಾರು ಪ್ರಯಾಣಿಕರ ಜೊತೆ ಗೋವಾದ ಮಡಗಾಂವ್ ಗೆ ರೈಲು ಹೊರಟಿತು. ದ.ಕ ಸಂಸದ ನಳಿನ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಸೇರಿ ಹಲವು ಬಿಜೆಪಿ ನಾಯಕರು ಪ್ರಯಾಣ ಬೆಳೆಸಿದ್ರು. ಮಂಗಳೂರಿನಿಂದ ಕೇವಲ 4.15 ಗಂಟೆಯಲ್ಲಿ ಗೋವಾ ತಲುಪಲಿರೋ ಟ್ರೈನ್ ಗೆ ಉಡುಪಿ ಮತ್ತು ಕಾರವಾರದಲ್ಲಿ ಮಾತ್ರ ಎರಡು ಕಡೆ ನಿಲುಗಡೆ ಇದೆ.
ಎಂಟು ಬೋಗಿಗಳ ಹವಾನಿಯಂತ್ರಿತ ವ್ಯವಸ್ಥೆಯ ವಂದೇ ಭಾರತ್ ರೈಲಿನಲ್ಲಿ ಏರ್ ಲೈನ್ ಮಾದರಿ ಸೀಟುಗಳ ಜೊತೆಗೆ ಎಕ್ಸಿಕ್ಯುಟಿವ್ ಚೇರ್ ಗಳ ವ್ಯವಸ್ಥೆ ಮಾಡಲಾಗಿದೆ. ಆನ್ ಬೋರ್ಡ್ ಸಸ್ಯಹಾರಿ ಮತ್ತು ಮಾಂಸಹಾರಿ ಊಟದ ವ್ಯವಸ್ಥೆ, ಆನ್ಬೋರ್ಡ್ ವೈ-ಫೈ ಮತ್ತು ಇನ್ಫೋಟೈನ್ಮೆಂಟ್ ಸಿಸ್ಟಮ್ , ಎಲೆಕ್ಟ್ರಿಕ್ ಔಟ್ಲೆಟ್ಗಳು ಮತ್ತು ರೀಡಿಂಗ್ ಲೈಟ್ಗಳ ಸೌಲಭ್ಯ, ಸ್ವಯಂಚಾಲಿತ ಬಾಗಿಲುಗಳು, ಸ್ಮೋಕ್ ಅಲರ್ಟ್, ಸಿಸಿಟಿವಿ ಕ್ಯಾಮೆರಾಗಳು, ಸೆನ್ಸಾರ್ ಆಧಾರಿತ ವಾಶ್ ಬೇಸಿನ್ ವ್ಯವಸ್ಥೆ ಇದೆ.