ಕರ್ನಾಟಕ ಕಾಂಗ್ರೆಸ್ ಸರಕಾರದ ನೂತನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು ಮಂಡಿಸಲಿದ್ದಾರೆ. ಈ ಬಾರಿಯ ರಾಜ್ಯ ಬಜೆಟ್ ಮಂಡನೆ ಮಾಡುವುದರ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ ಬರೆಯಲಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಮಂಡಿಸುತ್ತಿರುವುದು 14ನೇ ಬಜೆಟ್ ಆಗಿದ್ದು, ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಅತ್ಯಧಿಕ ಬಜೆಟ್ ಮಂಡನೆ ಮಾಡಿರುವ ಕೀರ್ತಿಗೆ ಸಿಎಂ ಸಿದ್ದರಾಮಯ್ಯ ಪಾತ್ರವಾಗಲಿದ್ದಾರೆ. ಈ ಮೂಲಕ ೧೩ ಬಾರಿ ಬಜೆಟ್ ಮಂಡನೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಮುರಿಯಲಿದ್ದಾರೆ.
ಕರ್ನಾಟಕದಲ್ಲಿ ಪೂರ್ಣ ಪ್ರಮಾಣದಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಹೊಂದಿರುವ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವಿಷಯದಲ್ಲಿಯೂ ದಾಖಲೆ ಮಾಡಿದ್ದಾರೆ.
ಸಿದ್ದರಾಮಯ್ಯ ಮಂಡಿಸಿದ ಬಜೆಟ್ಗಳು:
*2013 ರಿಂದ 2018 ವರೆಗೆ ಮುಖ್ಯಮಂತ್ರಿಯಾಗಿ 5 ಬಜೆಟ್ಗಳನ್ನು ಮಂಡಸಿದ್ದಾರೆ
*ಉಪಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ 7 ಬಜೆಟ್ಗಳನ್ನು ಮಂಡಸಿದ್ದಾರೆ
*ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿ 2005-07ರವರೆಗೆ ಸಿಎಂ ಬಜೆಟ್ ಮಂಡನೆ ಮಾಡಿದ್ದಾರೆ
*ಜೆಡಿ ಸರಕಾರದಲ್ಲಿ 1995-2000ರವರೆಗೆ ಬಜೆಟ್ ಮಂಡಿಸಿದ್ದಾರೆ
*ಎಚ್ಡಿ ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ 1995 ಮತ್ತು 1996ರಲ್ಲಿ ಎರಡು ಬಾರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದಾರೆ.
*ಜೆ ಎಚ್ ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ 1997, 1998 ಮತ್ತು 1999ರಲ್ಲಿ ಮೂರು ಬಾರಿ ಬಜೆಟ್ ಮಂಡಿಸಿದ್ದಾರೆ
*2005 ಮತ್ತು 2006ರಲ್ಲಿ ಎನ್ ಧರಂಸಿಂಗ್ ಸರಕಾರದಲ್ಲಿ ಎರಡು ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ
ಈ ಬಾರಿಯ ಕರ್ನಾಟಕ ಬಜೆಟ್ ಗಾತ್ರ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರಕಾರದ ನೂತನ ಬಜೆಟ್ ಅನ್ನು ಇದೇ ಜುಲೈ 7ರಂದು ಮಂಡನೆ ಮಾಡಲಿದ್ದಾರೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅಂದಾಜಿಸಿದ ಪ್ರಕಾರ ಈ ಬಾರಿ ಬಜೆಟ್ ಗಾತ್ರ ಸುಮಾರು 3.35 ಲಕ್ಷ ಕೋಟಿ ರೂಪಾಯಿ ಇರಲಿದೆ. ಈ ವರ್ಷದ ಆರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಗಾತ್ರ 3.09 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು. ಸಿದ್ದರಾಮಯ್ಯನವರು ಇದಕ್ಕಿಂತಲೂ ಹೆಚ್ಚು ಮೊತ್ತದ ಬಜೆಟ್ ಮಂಡಿಸುವ ಸೂಚನೆ ನೀಡಿದ್ದಾರೆ.
ಇನ್ನು 16ನೇ ವಿಧಾನಸಭೆಯ ಅಧಿವೇಶನ ಸೋಮವಾರ, ಜುಲೈ 3ರಂದು ಅಪರಾಹ್ನ 12.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಆರಂಭವಾಗಲಿದೆ.