ಜೈಪುರ: ರಾಜಸ್ಥಾನದ ಜೈಪುರದಲ್ಲಿ ಅರ್ಧ ಗಂಟೆಯ ಅವಧಿಯಲ್ಲಿ ಮೂರು ಕಡೆ ಭೂಕಂಪದ ಅನುಭವವಾಗಿದೆ. ಶುಕ್ರವಾರ ನಸುಕಿನ 4.09ರ ಸುಮಾರಿಗೆ 4.4ರ ತೀವ್ರತೆ, 4.22ರ ಸುಮಾರಿಗೆ 3.1 ರ ತೀವ್ರತೆ, 4.25 ರ ಸುಮಾರಿಗೆ 3.4ರ ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಈ ಮೂರು ಸ್ಥಳಗಳಲ್ಲಿ ಕ್ರಮೇಣ 10 ಕಿ.ಮೀ, 5 ಕಿ.ಮೀ, 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎನ್ಸಿಎಸ್ ವಿವರಿಸಿದೆ.
ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ. ಮಣಿಪುರದ ಉಖ್ರುಲ್ನಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಶುಕ್ರವಾರ ಮುಂಜಾನೆ 5 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. 20 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎನ್ಸಿಎಸ್ ಟ್ವೀಟ್ ಮಾಡಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ